Psalms · chapter 124 · verse 3
Psalm 124:3 in Kannada
ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
Avaru nammannu jeevitaraagi nungibiduttiddaru.
Psalm 124:3 in English
- King James Version (KJV)
- Then they had swallowed us up quick, when their wrath was kindled against us:
- World English Bible (WEB)
- then they would have swallowed us up alive, when their wrath was kindled against us,
- American Standard Version (ASV)
- Then they had swallowed us up alive, When their wrath was kindled against us:
- Bible in Basic English (BBE)
- They would have made a meal of us while still living, in the heat of their wrath against us:
- Darby Translation (DBY)
- Then they had swallowed us up alive, when their anger was kindled against us;
- Webster's Bible (WBS)
- Then they had swallowed us up quick, when their wrath was kindled against us:
- Young's Literal Translation (YLT)
- Then alive they had swallowed us up, In the burning of their anger against us,
Read in context
- 1ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
- 2ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,
- 3ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- 4ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
- 5ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
Cross references
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Numbers 16:30–34 ಅರಣ್ಯಕಾಂಡ 16:30–34ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Esther 3:12–13 ಎಸ್ತೇರಳು 3:12–13ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Psalm 56:1–2 ಕೀರ್ತನೆಗಳು 56:1–2ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.