Psalms · chapter 126 · verse 2
Psalm 126:2 in Kannada
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
Aaga namma baayi nageyindaloo naalige utsaaha dhvaniyindaloo tumbiddavu; aaga anyajanaru--kartanu ivarige mahatkaaryagalannu maadiddaane endu helidaru.
Psalm 126:2 in English
- King James Version (KJV)
- Then was our mouth filled with laughter, and our tongue with singing: then said they among the heathen, The LORD hath done great things for them.
- World English Bible (WEB)
- Then our mouth was filled with laughter, and our tongue with singing. Then they said among the nations, “The LORD has done great things for them.”
- American Standard Version (ASV)
- Then was our mouth filled with laughter, And our tongue with singing: Then said they among the nations, Jehovah hath done great things for them.
- Bible in Basic English (BBE)
- Then our mouths were full of laughing, and our tongues gave a glad cry; they said among the nations, The Lord has done great things for them.
- Darby Translation (DBY)
- Then was our mouth filled with laughter, and our tongue with rejoicing: then said they among the nations, Jehovah hath done great things for them.
- Webster's Bible (WBS)
- Then was our mouth filled with laughter, and our tongue with singing: then said they among the heathen, The LORD hath done great things for them.
- Young's Literal Translation (YLT)
- Then filled [with] laughter is our mouth, And our tongue [with] singing, Then do they say among nations, 'Jehovah did great things with these.'
Read in context
- 1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- 2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- 3ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- 4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
Cross references
- Job 8:21 ಯೋಬನು 8:21ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- Zechariah 8:22–23 ಜೆಕರ್ಯ 8:22–23ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 71:19 ಕೀರ್ತನೆಗಳು 71:19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Psalm 106:47–48 ಕೀರ್ತನೆಗಳು 106:47–48ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ. ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Psalm 53:6 ಕೀರ್ತನೆಗಳು 53:6ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Nehemiah 6:16 ನೆಹೆಮೀಯ 6:16ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
- Revelation 11:15–17 ಪ್ರಕಟನೆ 11:15–17ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Jeremiah 31:12–13 ಯೆರೆಮೀಯ 31:12–13ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.