Psalms · chapter 126 · verse 3
Psalm 126:3 in Kannada
ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
Kartanu namage mahatkaaryagalannu maadiddaane; aadakaarana naavu santoshisuttaa iddeve.
Psalm 126:3 in English
- King James Version (KJV)
- The LORD hath done great things for us; [whereof] we are glad.
- World English Bible (WEB)
- The LORD has done great things for us, and we are glad.
- American Standard Version (ASV)
- Jehovah hath done great things for us, [Whereof] we are glad.
- Bible in Basic English (BBE)
- The Lord has done great things for us; because of which we are glad.
- Darby Translation (DBY)
- Jehovah hath done great things for us; [and] we are joyful.
- Webster's Bible (WBS)
- The LORD hath done great things for us; [of which] we are glad.
- Young's Literal Translation (YLT)
- Jehovah did great things with us, We have been joyful.
Read in context
- 1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- 2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- 3ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- 4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
- 5ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
Cross references
- Luke 1:49 ಲೂಕನು 1:49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
- Isaiah 66:14 ಯೆಶಾಯ 66:14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Isaiah 51:9–11 ಯೆಶಾಯ 51:9–11ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ? ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Isaiah 12:4–6 ಯೆಶಾಯ 12:4–6ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 68:7–8 ಕೀರ್ತನೆಗಳು 68:7–8ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ. ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Psalm 66:5–6 ಕೀರ್ತನೆಗಳು 66:5–6ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ. ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
- Revelation 19:1–7 ಪ್ರಕಟನೆ 19:1–7ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Psalm 31:19 ಕೀರ್ತನೆಗಳು 31:19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- Ephesians 1:18–22 ಎಫೆಸದವರಿಗೆ 1:18–22ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Isaiah 11:11–16 ಯೆಶಾಯ 11:11–16ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Psalm 18:50 ಕೀರ್ತನೆಗಳು 18:50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.