Psalms · chapter 130 · verse 1
Psalm 130:1 in Kannada
ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
O kartane, aagaadhagalolaginda ninage kooguttene.
Psalm 130:1 in English
- King James Version (KJV)
- A Song of degrees. Out of the depths have I cried unto thee, O LORD.
- World English Bible (WEB)
- A Song of Ascents. Out of the depths I have cried to you, LORD.
- American Standard Version (ASV)
- A Song of Ascents. Out of the depths have I cried unto thee, O Jehovah.
- Bible in Basic English (BBE)
- A Song of the going up. Out of the deep have I sent up my cry to you, O Lord.
- Darby Translation (DBY)
- A Song of degrees. Out of the depths do I call upon thee, Jehovah.
- Webster's Bible (WBS)
- A Song of degrees. Out of the depths have I cried to thee, O LORD.
- Young's Literal Translation (YLT)
- A Song of the Ascents. From depths I have called Thee, Jehovah.
Read in context
- 1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
- 2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- 3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
Cross references
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Jonah 2:2–4 ಯೋನ 2:2–4ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
- Psalm 69:14–15 ಕೀರ್ತನೆಗಳು 69:14–15ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Psalm 116:3–4 ಕೀರ್ತನೆಗಳು 116:3–4ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Lamentations 3:53–55 ಪ್ರಲಾಪಗಳು 3:53–55ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Psalm 25:16–18 ಕೀರ್ತನೆಗಳು 25:16–18ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ. ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು. ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- Psalm 71:20 ಕೀರ್ತನೆಗಳು 71:20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Psalm 18:16 ಕೀರ್ತನೆಗಳು 18:16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.