Psalms · chapter 130 · verse 3
Psalm 130:3 in Kannada
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
Kartane, neenu akramagala mele kannittare o kartane, yaaru nilluvaru?
Psalm 130:3 in English
- King James Version (KJV)
- If thou, LORD, shouldest mark iniquities, O Lord, who shall stand?
- World English Bible (WEB)
- If you, LORD, kept a record of sins, Lord, who could stand?
- American Standard Version (ASV)
- If thou, Jehovah, shouldest mark iniquities, O Lord, who could stand?
- Bible in Basic English (BBE)
- O Jah, if you took note of every sin, who would go free?
- Darby Translation (DBY)
- If thou, Jah, shouldest mark iniquities, Lord, who shall stand?
- Webster's Bible (WBS)
- If thou, LORD, shouldest mark iniquities, O LORD, who shall stand?
- Young's Literal Translation (YLT)
- If iniquities Thou dost observe, O Lord, who doth stand?
Read in context
- 1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
- 2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- 3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- 4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- 5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
Cross references
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Romans 3:20–24 ರೋಮಾಪುರದವರಿಗೆ 3:20–24ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- John 8:7–9 ಯೋಹಾನನು 8:7–9ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- Revelation 6:17 ಪ್ರಕಟನೆ 6:17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Job 10:14 ಯೋಬನು 10:14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Job 9:20 ಯೋಬನು 9:20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- Job 9:2–3 ಯೋಬನು 9:2–3ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.