Psalms · chapter 132 · verse 18
Psalm 132:18 in Kannada
ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
Avana shatrugalige naachikeyannu hodisuvenu; aadare avana mele avana kireetavu shobhisuvadu endu heliddaane.
Psalm 132:18 in English
- King James Version (KJV)
- His enemies will I clothe with shame: but upon himself shall his crown flourish.
- World English Bible (WEB)
- I will clothe his enemies with shame, but on himself, his crown will shine.”
- American Standard Version (ASV)
- His enemies will I clothe with shame; But upon himself shall his crown flourish.
- Bible in Basic English (BBE)
- His haters will be clothed with shame; but I will make his crown shining.
- Darby Translation (DBY)
- His enemies will I clothe with shame; but upon himself shall his crown flourish.
- Webster's Bible (WBS)
- His enemies will I clothe with shame: but upon himself shall his crown flourish.
- Young's Literal Translation (YLT)
- His enemies I do clothe [with] shame, And upon him doth his crown flourish!
Read in context
- 16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- 17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- 18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
Cross references
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Job 8:22 ಯೋಬನು 8:22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Isaiah 58:10–12 ಯೆಶಾಯ 58:10–12ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.