Psalms · chapter 135 · verse 11
Psalm 135:11 in Kannada
ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
Amori yara arasanaada seehonanannoo baashaanina arasanaada oganannoo kaanaanina ellaa raajya galannoo hodedanu.
Psalm 135:11 in English
- King James Version (KJV)
- Sihon king of the Amorites, and Og king of Bashan, and all the kingdoms of Canaan:
- World English Bible (WEB)
- Sihon king of the Amorites, Og king of Bashan, and all the kingdoms of Canaan—
- American Standard Version (ASV)
- Sihon king of the Amorites, And Og king of Bashan, And all the kingdoms of Canaan,
- Bible in Basic English (BBE)
- Sihon, king of the Amorites, and Og, king of Bashan, and all the kingdoms of Canaan;
- Darby Translation (DBY)
- Sihon king of the Amorites, and Og king of Bashan, and all the kingdoms of Canaan;
- Webster's Bible (WBS)
- Sihon king of the Amorites, and Og king of Bashan, and all the kingdoms of Canaan:
- Young's Literal Translation (YLT)
- Even Sihon king of the Amorite, And Og king of Bashan, And all kingdoms of Canaan.
Read in context
- 9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
- 10ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
- 11ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- 12ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- 13ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
Cross references
- Joshua 12:7–24 ಯೆಹೋಶುವ 12:7–24ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ-- ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು; ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು; ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು; ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು; ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು; ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು; ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು; ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು; ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು; ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು; ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು; ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು; ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು; ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು; ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು. ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- Deuteronomy 29:7 ಧರ್ಮೋಪದೇಶಕಾಂಡ 29:7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Numbers 21:21–35 ಅರಣ್ಯಕಾಂಡ 21:21–35ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Joshua 10:1–12 ಯೆಹೋಶುವ 10:1–12ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು. ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ-- ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು. ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು. ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು. ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು. ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು. ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು. ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು. ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.