Psalms · chapter 136 · verse 19
Psalm 136:19 in Kannada
ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
Amoriyara arasanaada seehonanu obba; aatana karuneyu endendigoo ade.
Psalm 136:19 in English
- King James Version (KJV)
- Sihon king of the Amorites: for his mercy [endureth] for ever:
- World English Bible (WEB)
- Sihon king of the Amorites, for his loving kindness endures forever;
- American Standard Version (ASV)
- Sihon king of the Amorites; For his lovingkindness [endureth] forever;
- Bible in Basic English (BBE)
- Sihon, king of the Amorites: for his mercy is unchanging for ever:
- Darby Translation (DBY)
- Sihon king of the Amorites, for his loving-kindness [endureth] for ever,
- Webster's Bible (WBS)
- Sihon king of the Amorites: for his mercy [endureth] for ever:
- Young's Literal Translation (YLT)
- Even Sihon king of the Amorite, For to the age [is] His kindness.
Read in context
- 17ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 18ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 19ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- 20ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- 21ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
Cross references
- Deuteronomy 29:7 ಧರ್ಮೋಪದೇಶಕಾಂಡ 29:7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- Deuteronomy 2:30–36 ಧರ್ಮೋಪದೇಶಕಾಂಡ 2:30–36ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Numbers 21:21–24 ಅರಣ್ಯಕಾಂಡ 21:21–24ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.