Psalms · chapter 136 · verse 21
Psalm 136:21 in Kannada
ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
Avara deshavannu baadhyate yaagi kottaatanannu kondaadiri; aatana karu neyu endendigoo ade.
Psalm 136:21 in English
- King James Version (KJV)
- And gave their land for an heritage: for his mercy [endureth] for ever:
- World English Bible (WEB)
- and gave their land as an inheritance, for his loving kindness endures forever;
- American Standard Version (ASV)
- And gave their land for a heritage; For his lovingkindness [endureth] for ever;
- Bible in Basic English (BBE)
- And gave their land to his people for a heritage: for his mercy is unchanging for ever.
- Darby Translation (DBY)
- And gave their land for an inheritance, for his loving-kindness [endureth] for ever,
- Webster's Bible (WBS)
- And gave their land for a heritage: for his mercy [endureth] for ever:
- Young's Literal Translation (YLT)
- And He gave their land for inheritance, For to the age [is] His kindness.
Read in context
- 19ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- 20ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- 21ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 22ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- 23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
Cross references
- Nehemiah 9:22–24 ನೆಹೆಮೀಯ 9:22–24ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು. ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ; ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Psalm 44:2–3 ಕೀರ್ತನೆಗಳು 44:2–3ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Deuteronomy 3:12–17 ಧರ್ಮೋಪದೇಶಕಾಂಡ 3:12–17ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Psalm 105:44 ಕೀರ್ತನೆಗಳು 105:44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Joshua 12:1–7 ಯೆಹೋಶುವ 12:1–7ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ: ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು. ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
- Psalm 135:12 ಕೀರ್ತನೆಗಳು 135:12ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- Joshua 13:1–21 ಯೆಹೋಶುವ 13:1–21ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ. ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ, ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ; ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು; ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ. ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು. ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು. ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.