Psalms · chapter 136 · verse 23
Psalm 136:23 in Kannada
ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
Namma deenasthitiyalli nammannu nenasi kondaa tanannu kondaadiri; aatana karuneyu endem digoo ade.
Psalm 136:23 in English
- King James Version (KJV)
- Who remembered us in our low estate: for his mercy [endureth] for ever:
- World English Bible (WEB)
- who remembered us in our low estate, for his loving kindness endures forever;
- American Standard Version (ASV)
- Who remembered us in our low estate; For his lovingkindness [endureth] for ever;
- Bible in Basic English (BBE)
- Who kept us in mind when we were in trouble: for his mercy is unchanging for ever.
- Darby Translation (DBY)
- Who hath remembered us in our low estate, for his loving-kindness [endureth] for ever;
- Webster's Bible (WBS)
- Who remembered us in our low estate: for his mercy [endureth] for ever:
- Young's Literal Translation (YLT)
- Who in our lowliness hath remembered us, For to the age [is] His kindness.
Read in context
- 21ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- 22ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- 23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
- 24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Luke 1:48 ಲೂಕನು 1:48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- Psalm 116:6 ಕೀರ್ತನೆಗಳು 116:6ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- Psalm 142:6 ಕೀರ್ತನೆಗಳು 142:6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 113:7 ಕೀರ್ತನೆಗಳು 113:7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Ezekiel 16:3–13 ಯೆಹೆಜ್ಕೇಲನು 16:3–13ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Psalm 102:17 ಕೀರ್ತನೆಗಳು 102:17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.