Psalms · chapter 136 · verse 7
Psalm 136:7 in Kannada
ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Dodda belakugalannu untu maadidaata nannu kondaadiri; aatana karuneyu endendigoo ade.
Psalm 136:7 in English
- King James Version (KJV)
- To him that made great lights: for his mercy [endureth] for ever:
- World English Bible (WEB)
- to him who made the great lights, for his loving kindness endures forever;
- American Standard Version (ASV)
- To him that made great lights; For his lovingkindness [endureth] for ever:
- Bible in Basic English (BBE)
- To him who made great lights: for his mercy is unchanging for ever.
- Darby Translation (DBY)
- To him that made great lights, for his loving-kindness [endureth] for ever;
- Webster's Bible (WBS)
- To him that made great lights: for his mercy [endureth] for ever:
- Young's Literal Translation (YLT)
- To Him making great lights, For to the age [is] His kindness.
Read in context
- 5ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 7ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 8ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 9ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- Genesis 1:14–19 ಆದಿಕಾಂಡ 1:14–19ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು. ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Psalm 74:16–17 ಕೀರ್ತನೆಗಳು 74:16–17ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
- Psalm 104:19 ಕೀರ್ತನೆಗಳು 104:19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.