Psalms · chapter 137 · verse 1
Psalm 137:1 in Kannada
ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
Baabelina nadigala hattira naavu kootukondu haudu, cheeyo nannu jnyaapakamaadikondaaga naavu attevu.
Psalm 137:1 in English
- King James Version (KJV)
- By the rivers of Babylon, there we sat down, yea, we wept, when we remembered Zion.
- World English Bible (WEB)
- By the rivers of Babylon, there we sat down. Yes, we wept, when we remembered Zion.
- American Standard Version (ASV)
- By the rivers of Babylon, There we sat down, yea, we wept, When we remembered Zion.
- Bible in Basic English (BBE)
- By the rivers of Babylon we were seated, weeping at the memory of Zion,
- Darby Translation (DBY)
- By the rivers of Babylon, there we sat down; yea, we wept when we remembered Zion.
- Webster's Bible (WBS)
- By the rivers of Babylon, there we sat down, yes, we wept, when we remembered Zion.
- Young's Literal Translation (YLT)
- By rivers of Babylon — There we did sit, Yea, we wept when we remembered Zion.
Read in context
- 1ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
- 2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- 3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
Cross references
- Ezekiel 1:1 ಯೆಹೆಜ್ಕೇಲನು 1:1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- Ezekiel 3:15 ಯೆಹೆಜ್ಕೇಲನು 3:15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- Lamentations 3:48 ಪ್ರಲಾಪಗಳು 3:48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Lamentations 2:18 ಪ್ರಲಾಪಗಳು 2:18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- Lamentations 2:10–11 ಪ್ರಲಾಪಗಳು 2:10–11ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ. ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
- Jeremiah 51:50–51 ಯೆರೆಮೀಯ 51:50–51ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ. ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- Job 2:12–13 ಯೋಬನು 2:12–13ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು. ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Ezra 8:31 ಎಜ್ರನು 8:31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.