Psalms · chapter 137 · verse 5
Psalm 137:5 in Kannada
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
Yeroosaleme, naanu ninnannu maretubittare nanna balagai maretuhogali.
Psalm 137:5 in English
- King James Version (KJV)
- If I forget thee, O Jerusalem, let my right hand forget [her cunning].
- World English Bible (WEB)
- If I forget you, Jerusalem, let my right hand forget its skill.
- American Standard Version (ASV)
- If I forget thee, O Jerusalem, Let my right hand forget [her skill].
- Bible in Basic English (BBE)
- If I keep not your memory, O Jerusalem, let not my right hand keep the memory of its art.
- Darby Translation (DBY)
- If I forget thee, Jerusalem, let my right hand forget [its skill];
- Webster's Bible (WBS)
- If I forget thee, O Jerusalem, let my right hand forget [her skill] .
- Young's Literal Translation (YLT)
- If I forget thee, O Jerusalem, my right hand forgetteth!
Read in context
- 3ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
- 4ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- 5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
- 6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- 7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
Cross references
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Daniel 6:10–11 ದಾನಿಯೇಲನು 6:10–11ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು. ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Psalm 122:5–9 ಕೀರ್ತನೆಗಳು 122:5–9ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Nehemiah 1:2–4 ನೆಹೆಮೀಯ 1:2–4ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು. ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು. ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Nehemiah 2:2–3 ನೆಹೆಮೀಯ 2:2–3ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Psalm 102:13–14 ಕೀರ್ತನೆಗಳು 102:13–14ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.