Psalms · chapter 137 · verse 7
Psalm 137:7 in Kannada
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
Haalumaadiri, adara astivaarada varege haalu maadiri endu helida edomina makkalannu yeroosalemina divasadalli kartane, jnyaapaka maadiko.
Psalm 137:7 in English
- King James Version (KJV)
- Remember, O LORD, the children of Edom in the day of Jerusalem; who said, Rase [it], rase [it, even] to the foundation thereof.
- World English Bible (WEB)
- Remember, LORD, against the children of Edom in the day of Jerusalem, who said, “Raze it! Raze it even to its foundation!”
- American Standard Version (ASV)
- Remember, O Jehovah, against the children of Edom The day of Jerusalem; Who said, Rase it, rase it, Even to the foundation thereof.
- Bible in Basic English (BBE)
- O Lord, keep in mind against the children of Edom the day of Jerusalem; how they said, Let it be uncovered, uncovered even to its base.
- Darby Translation (DBY)
- Remember, O Jehovah, against the sons of Edom, the day of Jerusalem; who said, Lay [it] bare, Lay [it] bare, down to its foundation!
- Webster's Bible (WBS)
- Remember, O LORD, the children of Edom in the day of Jerusalem; who said, Raze [it] , raze [it] , [even] to its foundation.
- Young's Literal Translation (YLT)
- Remember, Jehovah, for the sons of Edom, The day of Jerusalem, Those saying, 'Rase, rase to its foundation!'
Read in context
- 5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
- 6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- 7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- 8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- 9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
Cross references
- Lamentations 4:21–22 ಪ್ರಲಾಪಗಳು 4:21–22ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Ezekiel 25:12–14 ಯೆಹೆಜ್ಕೇಲನು 25:12–14ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 49:7–22 ಯೆರೆಮೀಯ 49:7–22ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- Obadiah 1:10–14 ಓಬದ್ಯ 1:10–14ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- 1 Samuel 15:2 1 ಸಮುವೇಲನು 15:2ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Psalm 74:18 ಕೀರ್ತನೆಗಳು 74:18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- Amos 1:11 ಆಮೋಸ 1:11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
- Ezekiel 35:2 ಯೆಹೆಜ್ಕೇಲನು 35:2ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
- Isaiah 34:5–6 ಯೆಶಾಯ 34:5–6ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Obadiah 1:18–21 ಓಬದ್ಯ 1:18–21ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ. ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು. ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು. ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.