Psalms · chapter 139 · verse 3
Psalm 139:3 in Kannada
ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
Naanu nadeyuvadannoo malaguvadannoo neenu shodhisiddee; nanna maargagalellaa ninage gottaagive.
Psalm 139:3 in English
- King James Version (KJV)
- Thou compassest my path and my lying down, and art acquainted [with] all my ways.
- World English Bible (WEB)
- You search out my path and my lying down, and are acquainted with all my ways.
- American Standard Version (ASV)
- Thou searchest out my path and my lying down, And art acquainted with all my ways.
- Bible in Basic English (BBE)
- You keep watch over my steps and my sleep, and have knowledge of all my ways.
- Darby Translation (DBY)
- Thou searchest out my path and my lying down, and art acquainted with all my ways;
- Webster's Bible (WBS)
- Thou compassest my path and my lying down, and art acquainted [with] all my ways.
- Young's Literal Translation (YLT)
- My path and my couch Thou hast fanned, And [with] all my ways hast been acquainted.
Read in context
- 1ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
- 2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- 3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- 4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- 5ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
Cross references
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Job 31:4 ಯೋಬನು 31:4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
- Proverbs 5:20–21 ಜ್ಞಾನೋಕ್ತಿಗಳು 5:20–21ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Genesis 28:10–17 ಆದಿಕಾಂಡ 28:10–17ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
- 2 Samuel 12:9–12 2 ಸಮುವೇಲನು 12:9–12ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- Psalm 121:3–8 ಕೀರ್ತನೆಗಳು 121:3–8ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ. ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ. ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು. ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 139:18 ಕೀರ್ತನೆಗಳು 139:18ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 2 Samuel 11:27 2 ಸಮುವೇಲನು 11:27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Acts 5:3–4 ಅಪೊಸ್ತಲರ ಕೃತ್ಯಗಳು 5:3–4ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!