Psalms · chapter 140 · verse 7
Psalm 140:7 in Kannada
ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
Nanna rakshaneya balavaagiruva kartanaada o devare, nanna taleyannu yuddhada divasadalli muchchiddee.
Psalm 140:7 in English
- King James Version (KJV)
- O GOD the Lord, the strength of my salvation, thou hast covered my head in the day of battle.
- World English Bible (WEB)
- LORD, the Lord, the strength of my salvation, you have covered my head in the day of battle.
- American Standard Version (ASV)
- O Jehovah the Lord, the strength of my salvation, Thou hast covered my head in the day of battle.
- Bible in Basic English (BBE)
- O Lord God, the strength of my salvation, you have been a cover over my head in the day of the fight.
- Darby Translation (DBY)
- Jehovah, the Lord, is the strength of my salvation: thou hast covered my head in the day of battle.
- Webster's Bible (WBS)
- O GOD the Lord, the strength of my salvation, thou hast covered my head in the day of battle.
- Young's Literal Translation (YLT)
- O Jehovah, my Lord, strength of my salvation, Thou hast covered my head in the day of armour.
Read in context
- 5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- 6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
- 7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
- 8ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
- 9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
Cross references
- Psalm 62:7 ಕೀರ್ತನೆಗಳು 62:7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Psalm 18:1–2 ಕೀರ್ತನೆಗಳು 18:1–2ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ. ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- Deuteronomy 33:27–29 ಧರ್ಮೋಪದೇಶಕಾಂಡ 33:27–29ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- Psalm 28:7–8 ಕೀರ್ತನೆಗಳು 28:7–8ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Psalm 59:17 ಕೀರ್ತನೆಗಳು 59:17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 18:35 ಕೀರ್ತನೆಗಳು 18:35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- 1 Samuel 17:45–51 1 ಸಮುವೇಲನು 17:45–51ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.