Psalms · chapter 141 · verse 2
Psalm 141:2 in Kannada
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
Nanna praarthane ninna munde dhoopavaagiyoo nanna kai ettuvadu saayankaalada baliyaagiyoo siddhavaagirali.
Psalm 141:2 in English
- King James Version (KJV)
- Let my prayer be set forth before thee [as] incense; [and] the lifting up of my hands [as] the evening sacrifice.
- World English Bible (WEB)
- Let my prayer be set before you like incense; the lifting up of my hands like the evening sacrifice.
- American Standard Version (ASV)
- Let my prayer be set forth as incense before thee; The lifting up of my hands as the evening sacrifice.
- Bible in Basic English (BBE)
- Let my prayer be ordered before you like a sweet smell; and let the lifting up of my hands be like the evening offering.
- Darby Translation (DBY)
- Let my prayer be set forth before thee as incense, the lifting up of my hands as the evening oblation.
- Webster's Bible (WBS)
- Let my prayer be set forth before thee [as] incense; [and] the lifting up of my hands [as] the evening sacrifice.
- Young's Literal Translation (YLT)
- My prayer is prepared — incense before Thee, The lifting up of my hands — the evening present.
Read in context
- 1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
- 2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- 3ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
- 4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
Cross references
- Revelation 8:3–4 ಪ್ರಕಟನೆ 8:3–4ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Psalm 63:4 ಕೀರ್ತನೆಗಳು 63:4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- Luke 1:9–10 ಲೂಕನು 1:9–10ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು. ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- Exodus 30:7–9 ವಿಮೋಚನಕಾಂಡ 30:7–9ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
- Psalm 134:2 ಕೀರ್ತನೆಗಳು 134:2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Exodus 30:34–38 ವಿಮೋಚನಕಾಂಡ 30:34–38ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.