Psalms · chapter 142 · verse 2
Psalm 142:2 in Kannada
ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
Aatana munde nanna chinteyannu hoydiddene; nanna ikkattannu aatana munde tilisiddene.
Psalm 142:2 in English
- King James Version (KJV)
- I poured out my complaint before him; I shewed before him my trouble.
- World English Bible (WEB)
- I pour out my complaint before him. I tell him my troubles.
- American Standard Version (ASV)
- I pour out my complaint before him; I show before him my trouble.
- Bible in Basic English (BBE)
- I put all my sorrows before him; and made clear to him all my trouble.
- Darby Translation (DBY)
- I pour out my plaint before him; I shew before him my trouble.
- Webster's Bible (WBS)
- I poured out my complaint before him; I showed before him my trouble.
- Young's Literal Translation (YLT)
- I pour forth before Him my meditation, My distress before Him I declare.
Read in context
- 1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
- 2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- 3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- 4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
Cross references
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Isaiah 26:16 ಯೆಶಾಯ 26:16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
- Philippians 4:6–7 ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 102:1–28 ಕೀರ್ತನೆಗಳು 102:1–28ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ. ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು. ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ. ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ. ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ. ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ. ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ. ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ; ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ. ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ. ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ. ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು. ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ. ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು. ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ. ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ. ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು. ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Psalm 18:4–6 ಕೀರ್ತನೆಗಳು 18:4–6ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು. ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- 1 Samuel 1:15–16 1 ಸಮುವೇಲನು 1:15–16ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು. ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.