Psalms · chapter 143 · verse 10
Psalm 143:10 in Kannada
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
Ninna chittadante maaduvadakke nanage bodhisu; neenu nanna devaru; olledaagiruva ninna aatmavu nannannu nettaneya bhoomiyalli nadisali.
Psalm 143:10 in English
- King James Version (KJV)
- Teach me to do thy will; for thou [art] my God: thy spirit [is] good; lead me into the land of uprightness.
- World English Bible (WEB)
- Teach me to do your will, for you are my God. Your Spirit is good. Lead me in the land of uprightness.
- American Standard Version (ASV)
- Teach me to do thy will; For thou art my God: Thy Spirit is good; Lead me in the land of uprightness.
- Bible in Basic English (BBE)
- Give me teaching so that I may do your pleasure; for you are my God: let your good Spirit be my guide into the land of righteousness.
- Darby Translation (DBY)
- Teach me to do thy will; for thou art my God: let thy good Spirit lead me in a plain country.
- Webster's Bible (WBS)
- Teach me to do thy will; for thou [art] my God: thy spirit [is] good; lead me into the land of uprightness.
- Young's Literal Translation (YLT)
- Teach me to do Thy good pleasure, For Thou [art] my God — Thy Spirit [is] good, Lead me into a land of uprightness.
Read in context
- 8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- 10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- 11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- 12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
Cross references
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Psalm 23:3 ಕೀರ್ತನೆಗಳು 23:3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- John 16:13–15 ಯೋಹಾನನು 16:13–15ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.