Psalms · chapter 144 · verse 14
Psalm 144:14 in Kannada
ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
Namma ettugalu prayaasapaduvadakke balavulla vugalaagali; olage nugguvadaagali horage hogu vadaagali aagadirali; namma beedigalalli dooru vadu illadirali.heegiruva janaru dhanyaru; kartanu tamage devaraagiruva janaru dhanyaru.
Psalm 144:14 in English
- King James Version (KJV)
- [That] our oxen [may be] strong to labour; [that there be] no breaking in, nor going out; that [there be] no complaining in our streets.
- World English Bible (WEB)
- Our oxen will pull heavy loads. There is no breaking in, and no going away, and no outcry in our streets.
- American Standard Version (ASV)
- [When] our oxen are well laden; [When there is] no breaking in, and no going forth, And no outcry in our streets:
- Bible in Basic English (BBE)
- Our oxen are well weighted down; our cows give birth safely; there is no going out, and there is no cry of sorrow in our open places.
- Darby Translation (DBY)
- Our kine laden [with young]; no breaking in and no going forth, and no outcry in our streets.
- Webster's Bible (WBS)
- [That] our oxen [may be] strong to labor; that [there be] no breaking in, nor going out; that [there be] no complaining in our streets.
- Young's Literal Translation (YLT)
- Our oxen are carrying, there is no breach, And there is no outgoing, And there is no crying in our broad places.
Read in context
- 12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
- 13ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.
- 14ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- 15ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
Cross references
- Zechariah 8:3–5 ಜೆಕರ್ಯ 8:3–5ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- Deuteronomy 28:7 ಧರ್ಮೋಪದೇಶಕಾಂಡ 28:7ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
- 1 Samuel 31:7 1 ಸಮುವೇಲನು 31:7ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- Lamentations 1:4–6 ಪ್ರಲಾಪಗಳು 1:4–6ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ. ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ. ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
- 1 Samuel 13:17–23 1 ಸಮುವೇಲನು 13:17–23ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು; ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು. ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು. ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- Judges 6:6 ನ್ಯಾಯಸ್ಥಾಪಕರು 6:6ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- Jeremiah 13:17–19 ಯೆರೆಮೀಯ 13:17–19ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು. ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
- Jeremiah 14:2 ಯೆರೆಮೀಯ 14:2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
- Isaiah 24:11 ಯೆಶಾಯ 24:11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು