Psalms · chapter 145 · verse 10
Psalm 145:10 in Kannada
ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
O kartane, ninna kelasagalellaa ninnannu kondaaduvavu; ninna parishuddharu ninnannu stutisuvaru.
Psalm 145:10 in English
- King James Version (KJV)
- All thy works shall praise thee, O LORD; and thy saints shall bless thee.
- World English Bible (WEB)
- All your works will give thanks to you, LORD. Your saints will extol you.
- American Standard Version (ASV)
- All thy works shall give thanks unto thee, O Jehovah; And thy saints shall bless thee.
- Bible in Basic English (BBE)
- All the works of your hands give praise to you, O Lord; and your saints give you blessing.
- Darby Translation (DBY)
- All thy works shall praise thee, Jehovah, and thy saints shall bless thee.
- Webster's Bible (WBS)
- All thy works shall praise thee, O LORD; and thy saints shall bless thee.
- Young's Literal Translation (YLT)
- Confess Thee O Jehovah, do all Thy works, And Thy saints do bless Thee.
Read in context
- 8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
- 9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- 10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- 11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
- 12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
Cross references
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Psalm 103:22 ಕೀರ್ತನೆಗಳು 103:22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Isaiah 43:20–21 ಯೆಶಾಯ 43:20–21ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು. ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Revelation 7:9–12 ಪ್ರಕಟನೆ 7:9–12ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Psalm 148:1–14 ಕೀರ್ತನೆಗಳು 148:1–14ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Psalm 97:12 ಕೀರ್ತನೆಗಳು 97:12ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 30:4 ಕೀರ್ತನೆಗಳು 30:4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 68:26 ಕೀರ್ತನೆಗಳು 68:26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
- Psalm 32:11 ಕೀರ್ತನೆಗಳು 32:11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.