Psalms · chapter 145 · verse 12
Psalm 145:12 in Kannada
ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
Manushyana makkalige aatana paraakrama kriyegalannoo aatana raajyada prabheya ghanavannoo tiliyapadisuvaru.
Psalm 145:12 in English
- King James Version (KJV)
- To make known to the sons of men his mighty acts, and the glorious majesty of his kingdom.
- World English Bible (WEB)
- to make known to the sons of men his mighty acts, the glory of the majesty of his kingdom.
- American Standard Version (ASV)
- To make known to the sons of men his mighty acts, And the glory of the majesty of his kingdom.
- Bible in Basic English (BBE)
- So that the sons of men may have knowledge of his acts of power, and of the great glory of his kingdom.
- Darby Translation (DBY)
- To make known to the children of men his mighty acts, and the glorious splendour of his kingdom.
- Webster's Bible (WBS)
- To make known to the sons of men his mighty acts, and the glorious majesty of his kingdom.
- Young's Literal Translation (YLT)
- To make known to sons of men His mighty acts, The honour of the majesty of His kingdom.
Read in context
- 10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- 11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
- 12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- 13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- 14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
Cross references
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Psalm 105:1 ಕೀರ್ತನೆಗಳು 105:1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- Psalm 105:5 ಕೀರ್ತನೆಗಳು 105:5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Psalm 106:2 ಕೀರ್ತನೆಗಳು 106:2ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
- Psalm 145:6–12 ಕೀರ್ತನೆಗಳು 145:6–12ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Psalm 136:4–26 ಕೀರ್ತನೆಗಳು 136:4–26ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Ephesians 1:19–21 ಎಫೆಸದವರಿಗೆ 1:19–21ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Revelation 19:15–16 ಪ್ರಕಟನೆ 19:15–16ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.