Psalms · chapter 145 · verse 13
Psalm 145:13 in Kannada
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
Ninna raajyavu shaashvatavaada raajyavaagide; ninna doretanavu ellaa talatalaantaragalalli iruvadu.
Psalm 145:13 in English
- King James Version (KJV)
- Thy kingdom [is] an everlasting kingdom, and thy dominion [endureth] throughout all generations.
- World English Bible (WEB)
- Your kingdom is an everlasting kingdom. Your dominion endures throughout all generations. The LORD is faithful in all his words, and loving in all his deeds.
- American Standard Version (ASV)
- Thy kingdom is an everlasting kingdom, And thy dominion [endureth] throughout all generations.
- Bible in Basic English (BBE)
- Your kingdom is an eternal kingdom, and your rule is through all generations.
- Darby Translation (DBY)
- Thy kingdom is a kingdom of all ages, and thy dominion is throughout all generations.
- Webster's Bible (WBS)
- Thy kingdom [is] an everlasting kingdom, and thy dominion [endureth] throughout all generations.
- Young's Literal Translation (YLT)
- Thy kingdom [is] a kingdom of all ages, And Thy dominion [is] in all generations.
Read in context
- 11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
- 12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- 13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- 14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- 15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
Cross references
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- 2 Peter 1:11 2 ಪೇತ್ರನು 1:11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- 1 Corinthians 15:21–28 1 ಕೊರಿಂಥದವರಿಗೆ 15:21–28ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು. ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
- Psalm 146:10 ಕೀರ್ತನೆಗಳು 146:10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.