Psalms · chapter 145 · verse 4
Psalm 145:4 in Kannada
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
Talaantarakke innondu talaantaravu ninna kelasagalannu prakatisuttade; ninna paraakramagalannu tilisuttaare.
Psalm 145:4 in English
- King James Version (KJV)
- One generation shall praise thy works to another, and shall declare thy mighty acts.
- World English Bible (WEB)
- One generation will commend your works to another, and will declare your mighty acts.
- American Standard Version (ASV)
- One generation shall laud thy works to another, And shall declare thy mighty acts.
- Bible in Basic English (BBE)
- One generation after another will give praise to your great acts, and make clear the operation of your strength.
- Darby Translation (DBY)
- One generation shall laud thy works to another, and shall declare thy mighty acts.
- Webster's Bible (WBS)
- One generation shall praise thy works to another, and shall declare thy mighty acts.
- Young's Literal Translation (YLT)
- Generation to generation praiseth Thy works, And Thy mighty acts they declare.
Read in context
- 2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- 3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- 4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- 5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- 6ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
Cross references
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 78:3–7 ಕೀರ್ತನೆಗಳು 78:3–7ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Joshua 4:21–24 ಯೆಹೋಶುವ 4:21–24ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು. ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು. ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- Psalm 44:1–2 ಕೀರ್ತನೆಗಳು 44:1–2ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
- Exodus 12:26–27 ವಿಮೋಚನಕಾಂಡ 12:26–27ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Exodus 13:14–15 ವಿಮೋಚನಕಾಂಡ 13:14–15ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ. ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.