Psalms · chapter 146 · verse 2
Psalm 146:2 in Kannada
ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
Nanna praanaviruva varegoo kartanannu stutisuvenu; nanna jeevamaanavellaa nanna devarannu keerti suvenu.
Psalm 146:2 in English
- King James Version (KJV)
- While I live will I praise the LORD: I will sing praises unto my God while I have any being.
- World English Bible (WEB)
- While I live, I will praise the LORD. I will sing praises to my God as long as I exist.
- American Standard Version (ASV)
- While I live will I praise Jehovah: I will sing praises unto my God while I have any being.
- Bible in Basic English (BBE)
- While I have breath I will give praise to the Lord: I will make melody to my God while I have my being.
- Darby Translation (DBY)
- As long as I live will I praise Jehovah; I will sing psalms unto my God while I have my being.
- Webster's Bible (WBS)
- While I live will I praise the LORD: I will sing praises to my God while I have any being.
- Young's Literal Translation (YLT)
- I praise Jehovah during my life, I sing praise to my God while I exist.
Read in context
- 1ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
- 2ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- 3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
- 4ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
Cross references
- Psalm 63:4 ಕೀರ್ತನೆಗಳು 63:4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- Psalm 104:33 ಕೀರ್ತನೆಗಳು 104:33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 71:14–15 ಕೀರ್ತನೆಗಳು 71:14–15ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು. ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Revelation 7:9–17 ಪ್ರಕಟನೆ 7:9–17ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.