Psalms · chapter 147 · verse 10
Psalm 147:10 in Kannada
ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
Aatanu kudu reya shaktiyalli santoshisuvadilla; manushyana todeyabalavannu mechchuvadilla.
Psalm 147:10 in English
- King James Version (KJV)
- He delighteth not in the strength of the horse: he taketh not pleasure in the legs of a man.
- World English Bible (WEB)
- He doesn’t delight in the strength of the horse. He takes no pleasure in the legs of a man.
- American Standard Version (ASV)
- He delighteth not in the strength of the horse: He taketh no pleasure in the legs of a man.
- Bible in Basic English (BBE)
- He has no delight in the strength of a horse; he takes no pleasure in the legs of a man.
- Darby Translation (DBY)
- He delighteth not in the strength of the horse, he taketh not pleasure in the legs of a man;
- Webster's Bible (WBS)
- He delighteth not in the strength of the horse: he taketh not pleasure in the legs of a man.
- Young's Literal Translation (YLT)
- Not in the might of the horse doth He delight, Not in the legs of a man is He pleased.
Read in context
- 8ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
- 9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- 10ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
- 11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- 12ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
Cross references
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Psalm 33:16–18 ಕೀರ್ತನೆಗಳು 33:16–18ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ. ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Job 39:19–25 ಯೋಬನು 39:19–25ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ? ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ. ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ. ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ. ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ. ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ. ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- 2 Samuel 1:23 2 ಸಮುವೇಲನು 1:23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
- 2 Samuel 2:18–23 2 ಸಮುವೇಲನು 2:18–23ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು. ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು. ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು. ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು. ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.