Psalms · chapter 147 · verse 20
Psalm 147:20 in Kannada
ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Yaava janaangakkaadaroo aatanu heege maada lilla; nyaayavidhigalannu avaru tilukolluvadilla. Neevu kartanannu stutisiri.
Psalm 147:20 in English
- King James Version (KJV)
- He hath not dealt so with any nation: and [as for his] judgments, they have not known them. Praise ye the LORD.
- World English Bible (WEB)
- He has not done this for just any nation. They don’t know his ordinances. Praise the LORD!
- American Standard Version (ASV)
- He hath not dealt so with any nation; And as for his ordinances, they have not known them. Praise ye Jehovah.
- Bible in Basic English (BBE)
- He has not done these things for any other nation: and as for his laws, they have no knowledge of them. Let the Lord be praised.
- Darby Translation (DBY)
- He hath not dealt thus with any nation; and as for [his] judgments, they have not known them. Hallelujah!
- Webster's Bible (WBS)
- He hath not dealt so with any nation: and [as for his] judgments, they have not known them. Praise ye the LORD.
- Young's Literal Translation (YLT)
- He hath not done so to any nation, As to judgments, they have not known them. Praise ye Jah!
Read in context
- 18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
- 19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- 20ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Cross references
- Deuteronomy 4:32–34 ಧರ್ಮೋಪದೇಶಕಾಂಡ 4:32–34ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ? ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Romans 3:1–2 ರೋಮಾಪುರದವರಿಗೆ 3:1–2ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು? ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Isaiah 5:1–7 ಯೆಶಾಯ 5:1–7ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Proverbs 29:18 ಜ್ಞಾನೋಕ್ತಿಗಳು 29:18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
- Acts 26:27 ಅಪೊಸ್ತಲರ ಕೃತ್ಯಗಳು 26:27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
- Acts 14:16 ಅಪೊಸ್ತಲರ ಕೃತ್ಯಗಳು 14:16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- Matthew 21:33–41 ಮತ್ತಾಯನು 21:33–41ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು