Psalms · chapter 147 · verse 3
Psalm 147:3 in Kannada
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
Aatanu murida hrudayadavarannu svasthamaadi avara gaayagalannu kattuttaane.
Psalm 147:3 in English
- King James Version (KJV)
- He healeth the broken in heart, and bindeth up their wounds.
- World English Bible (WEB)
- He heals the broken in heart, and binds up their wounds.
- American Standard Version (ASV)
- He healeth the broken in heart, And bindeth up their wounds.
- Bible in Basic English (BBE)
- He makes the broken-hearted well, and puts oil on their wounds.
- Darby Translation (DBY)
- He healeth the broken in heart, and bindeth up their wounds.
- Webster's Bible (WBS)
- He healeth the broken in heart, and bindeth up their wounds.
- Young's Literal Translation (YLT)
- Who is giving healing to the broken of heart, And is binding up their griefs.
Read in context
- 1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
- 2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
- 3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- 4ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
- 5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
Cross references
- Psalm 34:18 ಕೀರ್ತನೆಗಳು 34:18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- Job 5:18 ಯೋಬನು 5:18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Hosea 6:1–2 ಹೋಶೇಯ 6:1–2ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.