Psalms · chapter 148 · verse 3
Psalm 148:3 in Kannada
ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
Soorya chandrare, aatanannu stutisiri; holeyuva nakshatragale, aata nannu stutisiri.
Psalm 148:3 in English
- King James Version (KJV)
- Praise ye him, sun and moon: praise him, all ye stars of light.
- World English Bible (WEB)
- Praise him, sun and moon! Praise him, all you shining stars!
- American Standard Version (ASV)
- Praise ye him, sun and moon: Praise him, all ye stars of light.
- Bible in Basic English (BBE)
- Give praise to him, you sun and moon: give praise to him, all you stars of light.
- Darby Translation (DBY)
- Praise him, sun and moon; praise him, all ye stars of light.
- Webster's Bible (WBS)
- Praise ye him, sun and moon: praise him, all ye stars of light.
- Young's Literal Translation (YLT)
- Praise ye Him, sun and moon, Praise ye Him, all stars of light.
Read in context
- 1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
- 2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- 3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- 4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- 5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
Cross references
- Psalm 19:1–6 ಕೀರ್ತನೆಗಳು 19:1–6ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ. ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ. ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Psalm 136:7–9 ಕೀರ್ತನೆಗಳು 136:7–9ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 8:1–3 ಕೀರ್ತನೆಗಳು 8:1–3ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ. ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ. ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
- Genesis 1:14–16 ಆದಿಕಾಂಡ 1:14–16ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Jeremiah 33:20 ಯೆರೆಮೀಯ 33:20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ