Psalms · chapter 148 · verse 7
Psalm 148:7 in Kannada
ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
Bhoomiyinda kartanannu stutisiri; ellaa agaadhagale,
Psalm 148:7 in English
- King James Version (KJV)
- Praise the LORD from the earth, ye dragons, and all deeps:
- World English Bible (WEB)
- Praise the LORD from the earth, you great sea creatures, and all depths,
- American Standard Version (ASV)
- Praise Jehovah from the earth, Ye sea-monsters, and all deeps;
- Bible in Basic English (BBE)
- Give praise to the Lord from the earth, you great sea-beasts, and deep places:
- Darby Translation (DBY)
- Praise Jehovah from the earth, ye sea-monsters, and all deeps;
- Webster's Bible (WBS)
- Praise the LORD from the earth, ye dragons, and all deeps:
- Young's Literal Translation (YLT)
- Praise ye Jehovah from the earth, Dragons and all deeps,
Read in context
- 5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- 6ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- 7ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
- 8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- 9ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
Cross references
- Psalm 74:13–14 ಕೀರ್ತನೆಗಳು 74:13–14ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- Genesis 1:21 ಆದಿಕಾಂಡ 1:21ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Psalm 104:25–26 ಕೀರ್ತನೆಗಳು 104:25–26ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- Job 41:1–34 ಯೋಬನು 41:1–34ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ? ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ? ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ? ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ? ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ? ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ? ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ? ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ. ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ. ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು? ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ. ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ. ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು? ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ. ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ. ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ. ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ; ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ. ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ. ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು. ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು. ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು. ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು. ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ. ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ. ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು, ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು. ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ. ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು. ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ. ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ. ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ. ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು. ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- Isaiah 43:20 ಯೆಶಾಯ 43:20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?