Psalms · chapter 149 · verse 2
Psalm 149:2 in Kannada
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
Israayelu tannannu untumaadidaatanalli santoshisali; cheeyonina makkalu tamma arasanalli ullaasisali.
Psalm 149:2 in English
- King James Version (KJV)
- Let Israel rejoice in him that made him: let the children of Zion be joyful in their King.
- World English Bible (WEB)
- Let Israel rejoice in him who made them. Let the children of Zion be joyful in their King.
- American Standard Version (ASV)
- Let Israel rejoice in him that made him: Let the children of Zion be joyful in their King.
- Bible in Basic English (BBE)
- Let Israel have joy in his maker; let the children of Zion be glad in their King.
- Darby Translation (DBY)
- Let Israel rejoice in his Maker; let the sons of Zion be joyful in their King.
- Webster's Bible (WBS)
- Let Israel rejoice in him that made him: let the children of Zion be joyful in their King.
- Young's Literal Translation (YLT)
- Israel doth rejoice in his Maker, Sons of Zion do joy in their king.
Read in context
- 1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- 2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- 3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- 4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
Cross references
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Psalm 100:1–3 ಕೀರ್ತನೆಗಳು 100:1–3ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ. ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Deuteronomy 7:6–7 ಧರ್ಮೋಪದೇಶಕಾಂಡ 7:6–7ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Luke 19:38 ಲೂಕನು 19:38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Job 35:10 ಯೋಬನು 35:10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Psalm 135:3–4 ಕೀರ್ತನೆಗಳು 135:3–4ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು. ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- John 19:19–22 ಯೋಹಾನನು 19:19–22ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.