Psalms · chapter 15 · verse 3
Psalm 15:3 in Kannada
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
Avanu tanna naaligeyinda chaadi heluvadilla; tanna nereyavanannu nindisu vadilla;
Psalm 15:3 in English
- King James Version (KJV)
- [He that] backbiteth not with his tongue, nor doeth evil to his neighbour, nor taketh up a reproach against his neighbour.
- World English Bible (WEB)
- he who doesn’t slander with his tongue, nor does evil to his friend, nor casts slurs against his fellow man;
- American Standard Version (ASV)
- He that slandereth not with his tongue, Nor doeth evil to his friend, Nor taketh up a reproach against his neighbor;
- Bible in Basic English (BBE)
- Whose tongue is not false, who does no evil to his friend, and does not take away the good name of his neighbour;
- Darby Translation (DBY)
- [He that] slandereth not with his tongue, doeth not evil to his companion, nor taketh up a reproach against his neighbour;
- Webster's Bible (WBS)
- [He that] backbiteth not with his tongue, nor doeth evil to his neighbor, nor taketh up a reproach against his neighbor.
- Young's Literal Translation (YLT)
- He hath not slandered by his tongue, He hath not done to his friend evil; And reproach he hath not lifted up Against his neighbour.
Read in context
- 1ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
- 2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- 3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- 4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Cross references
- Romans 13:10 ರೋಮಾಪುರದವರಿಗೆ 13:10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Psalm 101:5–8 ಕೀರ್ತನೆಗಳು 101:5–8ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- James 4:11 ಯಾಕೋಬನು 4:11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- Jeremiah 9:4–9 ಯೆರೆಮೀಯ 9:4–9ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ? ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ. ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Isaiah 56:2 ಯೆಶಾಯ 56:2ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
- 1 Peter 2:1–2 1 ಪೇತ್ರನು 2:1–2ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Exodus 23:1–33 ವಿಮೋಚನಕಾಂಡ 23:1–33ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ. ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ. ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ. ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು. ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ. ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ. ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು. ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ. ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು. ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು. ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು. ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು. ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು. ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು. ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು. ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು. ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ. ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Proverbs 22:10 ಜ್ಞಾನೋಕ್ತಿಗಳು 22:10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ