Psalms · chapter 150 · verse 1
Psalm 150:1 in Kannada
ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
Neevu kartanannu stutisiri. Devarannu aatana parishuddha aalayadalli stutisiri; aatana balada aantarikshadalli aatanannu stutisiri.
Psalm 150:1 in English
- King James Version (KJV)
- Praise ye the LORD. Praise God in his sanctuary: praise him in the firmament of his power.
- World English Bible (WEB)
- Praise the LORD! Praise God in his sanctuary! Praise him in his heavens for his acts of power!
- American Standard Version (ASV)
- Praise ye Jehovah. Praise God in his sanctuary: Praise him in the firmament of his power.
- Bible in Basic English (BBE)
- Let the Lord be praised. Give praise to God in his holy place: give him praise in the heaven of his power.
- Darby Translation (DBY)
- Hallelujah! Praise God in his sanctuary; praise him in the firmament of his power.
- Webster's Bible (WBS)
- Praise ye the LORD. Praise God in his sanctuary: praise him in the firmament of his power.
- Young's Literal Translation (YLT)
- Praise ye Jah! Praise ye God in His holy place, Praise Him in the expanse of His strength.
Read in context
- 1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
- 2ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ.
- 3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
Cross references
- Psalm 149:1 ಕೀರ್ತನೆಗಳು 149:1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- Psalm 134:2 ಕೀರ್ತನೆಗಳು 134:2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Psalm 116:18–19 ಕೀರ್ತನೆಗಳು 116:18–19ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Psalm 29:9 ಕೀರ್ತನೆಗಳು 29:9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Ezekiel 10:1 ಯೆಹೆಜ್ಕೇಲನು 10:1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- Psalm 118:19–20 ಕೀರ್ತನೆಗಳು 118:19–20ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- Psalm 102:19 ಕೀರ್ತನೆಗಳು 102:19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Genesis 1:6–8 ಆದಿಕಾಂಡ 1:6–8ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು. ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- Ezekiel 1:22–26 ಯೆಹೆಜ್ಕೇಲನು 1:22–26ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Psalm 66:13–16 ಕೀರ್ತನೆಗಳು 66:13–16ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ. ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.