Psalms · chapter 16 · verse 10
Psalm 16:10 in Kannada
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Yaakandare neenu nanna aatmavannu narakadalli bittubiduvadilla; ninna parishuddhana koleyuvikeyannu noda godisuvadilla.jeevada maargavannu nanage tilisuvi; ninna sammukhadalli paripoorna santosha voo ninna balagadeyalli shaashvata bhaagyavoo iruttave.
Psalm 16:10 in English
- King James Version (KJV)
- For thou wilt not leave my soul in hell; neither wilt thou suffer thine Holy One to see corruption.
- World English Bible (WEB)
- For you will not leave my soul in Sheol, neither will you allow your holy one to see corruption.
- American Standard Version (ASV)
- For thou wilt not leave my soul to Sheol; Neither wilt thou suffer thy holy one to see corruption.
- Bible in Basic English (BBE)
- For you will not let my soul be prisoned in the underworld; you will not let your loved one see the place of death.
- Darby Translation (DBY)
- For thou wilt not leave my soul to Sheol, neither wilt thou allow thy Holy One to see corruption.
- Webster's Bible (WBS)
- For thou wilt not leave my soul in hell; neither wilt thou suffer thy Holy One to see corruption.
- Young's Literal Translation (YLT)
- For Thou dost not leave my soul to Sheol, Nor givest thy saintly one to see corruption.
Read in context
- 8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- 9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- 10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- 11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Cross references
- Acts 2:27–31 ಅಪೊಸ್ತಲರ ಕೃತ್ಯಗಳು 2:27–31ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Acts 13:35–38 ಅಪೊಸ್ತಲರ ಕೃತ್ಯಗಳು 13:35–38ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Revelation 20:13 ಪ್ರಕಟನೆ 20:13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- Isaiah 14:9 ಯೆಶಾಯ 14:9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- Luke 16:23 ಲೂಕನು 16:23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Isaiah 5:14 ಯೆಶಾಯ 5:14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 1 Corinthians 15:50–55 1 ಕೊರಿಂಥದವರಿಗೆ 15:50–55ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
- Psalm 139:8 ಕೀರ್ತನೆಗಳು 139:8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.