Psalms · chapter 18 · verse 10
Psalm 18:10 in Kannada
ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
Aatanu keroobina mele kootu haaridanu; haudu, gaaliya rekkegala mele haaridanu.
Psalm 18:10 in English
- King James Version (KJV)
- And he rode upon a cherub, and did fly: yea, he did fly upon the wings of the wind.
- World English Bible (WEB)
- He rode on a cherub, and flew. Yes, he soared on the wings of the wind.
- American Standard Version (ASV)
- And he rode upon a cherub, and did fly; Yea, he soared upon the wings of the wind.
- Bible in Basic English (BBE)
- And he went in flight through the air, seated on a storm-cloud: going quickly on the wings of the wind.
- Darby Translation (DBY)
- And he rode upon a cherub and did fly; yea, he flew fast upon the wings of the wind.
- Webster's Bible (WBS)
- And he rode upon a cherub, and flew; yes, he flew upon the wings of the wind.
- Young's Literal Translation (YLT)
- And He rideth on a cherub, and doth fly, And He flieth on wings of wind.
Read in context
- 8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
- 9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
- 10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- 11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- 12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
Cross references
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- 2 Samuel 22:11–12 2 ಸಮುವೇಲನು 22:11–12ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು. ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Ezekiel 1:5–14 ಯೆಹೆಜ್ಕೇಲನು 1:5–14ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
- Ezekiel 10:20–22 ಯೆಹೆಜ್ಕೇಲನು 10:20–22ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.