Psalms · chapter 18 · verse 17
Psalm 18:17 in Kannada
ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
Aatanu nannannu balavulla shatruvi nindaloo hagemaadidavanindaloo bidisidanu; avaru nanaginta balishtharaagiddaru.
Psalm 18:17 in English
- King James Version (KJV)
- He delivered me from my strong enemy, and from them which hated me: for they were too strong for me.
- World English Bible (WEB)
- He delivered me from my strong enemy, from those who hated me; for they were too mighty for me.
- American Standard Version (ASV)
- He delivered me from my strong enemy, And from them that hated me; for they were too mighty for me.
- Bible in Basic English (BBE)
- He made me free from my strong hater, and from those who were against me, because they were stronger than I.
- Darby Translation (DBY)
- He delivered me from my strong enemy, and from them that hated me; for they were mightier than I.
- Webster's Bible (WBS)
- He delivered me from my strong enemy, and from them who hated me: for they were too strong for me.
- Young's Literal Translation (YLT)
- He delivereth me from my strong enemy, And from those hating me, For they have been stronger than I.
Read in context
- 15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- 16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
- 17ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
- 18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
- 19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
Cross references
- Hebrews 2:14–15 ಇಬ್ರಿಯರಿಗೆ 2:14–15ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Job 16:9 ಯೋಬನು 16:9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
- Psalm 142:6 ಕೀರ್ತನೆಗಳು 142:6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Ephesians 6:10–12 ಎಫೆಸದವರಿಗೆ 6:10–12ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Psalm 69:4–14 ಕೀರ್ತನೆಗಳು 69:4–14ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು. ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ. ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ. ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು. ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
- Psalm 118:7 ಕೀರ್ತನೆಗಳು 118:7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- Psalm 9:13 ಕೀರ್ತನೆಗಳು 9:13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
- 2 Samuel 22:18 2 ಸಮುವೇಲನು 22:18ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;
- Psalm 18:40–41 ಕೀರ್ತನೆಗಳು 18:40–41ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- Psalm 38:19 ಕೀರ್ತನೆಗಳು 38:19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
- 2 Samuel 22:1 2 ಸಮುವೇಲನು 22:1ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--