Psalms · chapter 18 · verse 29
Psalm 18:29 in Kannada
ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
Ninninda naanu dandina mele biddenu; nanna devarinda gode negedenu.
Psalm 18:29 in English
- King James Version (KJV)
- For by thee I have run through a troop; and by my God have I leaped over a wall.
- World English Bible (WEB)
- For by you, I advance through a troop. By my God, I leap over a wall.
- American Standard Version (ASV)
- For by thee I run upon a troop; And by my God do I leap over a wall.
- Bible in Basic English (BBE)
- By your help I have made a way through the wall which was shutting me in; by the help of my God I have gone over a wall.
- Darby Translation (DBY)
- For by thee I have run through a troop; and by my God have I leaped over a wall.
- Webster's Bible (WBS)
- For by thee I have run through a troop; and by my God have I leaped over a wall.
- Young's Literal Translation (YLT)
- For by Thee I run — a troop! And by my God I leap a wall.
Read in context
- 27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- 28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- 29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
- 30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
Cross references
- 2 Samuel 22:30 2 ಸಮುವೇಲನು 22:30ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
- Ephesians 6:10–13 ಎಫೆಸದವರಿಗೆ 6:10–13ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 2 Samuel 5:19–20 2 ಸಮುವೇಲನು 5:19–20ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- Psalm 44:6–7 ಕೀರ್ತನೆಗಳು 44:6–7ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- 1 Samuel 23:2 1 ಸಮುವೇಲನು 23:2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- Psalm 144:1 ಕೀರ್ತನೆಗಳು 144:1ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
- 2 Samuel 5:25 2 ಸಮುವೇಲನು 5:25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.