Psalms · chapter 18 · verse 3
Psalm 18:3 in Kannada
ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
Stutisatakka kartanige naanu moreyiduttene; heege naanu nanna shatrugalolaginda rakshisalpaduttene.
Psalm 18:3 in English
- King James Version (KJV)
- I will call upon the LORD, [who is worthy] to be praised: so shall I be saved from mine enemies.
- World English Bible (WEB)
- I call on the LORD, who is worthy to be praised; and I am saved from my enemies.
- American Standard Version (ASV)
- I will call upon Jehovah, who is worthy to be praised: So shall I be saved from mine enemies.
- Bible in Basic English (BBE)
- I will send up my cry to the Lord, who is to be praised; so will I be made safe from those who are against me.
- Darby Translation (DBY)
- I will call upon Jehovah, who is to be praised: so shall I be saved from mine enemies.
- Webster's Bible (WBS)
- I will call upon the LORD, [who is worthy] to be praised: so shall I be saved from my enemies.
- Young's Literal Translation (YLT)
- The 'Praised One' I call Jehovah, And from my enemies I am saved.
Read in context
- 1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- 2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- 3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- 4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- 5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
Cross references
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Luke 1:71 ಲೂಕನು 1:71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Romans 8:31–39 ರೋಮಾಪುರದವರಿಗೆ 8:31–39ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ? ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ; ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 2 Samuel 22:4 2 ಸಮುವೇಲನು 22:4ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Psalm 55:16 ಕೀರ್ತನೆಗಳು 55:16ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
- Psalm 96:4 ಕೀರ್ತನೆಗಳು 96:4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- Psalm 28:1–2 ಕೀರ್ತನೆಗಳು 28:1–2ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು. ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Philippians 4:6–7 ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.