Psalms · chapter 19 · verse 13
Psalm 19:13 in Kannada
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
Garvada paapagalinda ninna sevakanannu doora maadu. Avu nannannu aalade irali; aaga naanu sampoornanaagiddu mahaadrohadinda niraparaa dhiyaaguvenu.nanna balavoo nanna vimocha kanoo aagiruva kartane, nanna baayiya maatu galoo nanna hrudayada dhyaanavoo ninna munde mechchikeyaagirali.
Psalm 19:13 in English
- King James Version (KJV)
- Keep back thy servant also from presumptuous [sins;] let them not have dominion over me: then shall I be upright, and I shall be innocent from the great transgression.
- World English Bible (WEB)
- Keep back your servant also from presumptuous sins. Let them not have dominion over me. Then I will be upright. I will be blameless and innocent of great transgression.
- American Standard Version (ASV)
- Keep back thy servant also from presumptuous [sins]; Let them not have dominion over me: Then shall I be upright, And I shall be clear from great transgression.
- Bible in Basic English (BBE)
- Keep your servant back from sins of pride; let them not have rule over me: then will I be upright and free from great sin.
- Darby Translation (DBY)
- Keep back thy servant also from presumptuous [sins]; let them not have dominion over me: then shall I be perfect, and I shall be innocent from great transgression.
- Webster's Bible (WBS)
- Keep back thy servant also from presumptuous [sins] ; let them not have dominion over me: then shall I be upright, and I shall be innocent from the great transgression.
- Young's Literal Translation (YLT)
- Also — from presumptuous ones keep back Thy servant, Let them not rule over me, Then am I perfect, And declared innocent of much transgression,
Read in context
- 11ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- 12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- 13ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- 14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
Cross references
- Psalm 119:133 ಕೀರ್ತನೆಗಳು 119:133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- Romans 6:12–14 ರೋಮಾಪುರದವರಿಗೆ 6:12–14ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ; ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ. ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Psalm 7:10 ಕೀರ್ತನೆಗಳು 7:10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 1 Samuel 25:39 1 ಸಮುವೇಲನು 25:39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
- Deuteronomy 17:12–13 ಧರ್ಮೋಪದೇಶಕಾಂಡ 17:12–13ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು; ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- Genesis 20:6 ಆದಿಕಾಂಡ 20:6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Psalm 18:23 ಕೀರ್ತನೆಗಳು 18:23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Romans 6:16–22 ರೋಮಾಪುರದವರಿಗೆ 6:16–22ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ. ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.