Psalms · chapter 19 · verse 4
Psalm 19:4 in Kannada
ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
Bhoomiya melellaa avu gala prabhutvavoo bhoolokada antyada varege avugala nudigaloo haradive; avugalalli aatanu sooryanige gudaaravannu haakiddaane.
Psalm 19:4 in English
- King James Version (KJV)
- Their line is gone out through all the earth, and their words to the end of the world. In them hath he set a tabernacle for the sun,
- World English Bible (WEB)
- Their voice has gone out through all the earth, their words to the end of the world. In them he has set a tent for the sun,
- American Standard Version (ASV)
- Their line is gone out through all the earth, And their words to the end of the world. In them hath he set a tabernacle for the sun,
- Bible in Basic English (BBE)
- Their line has gone out through all the earth, and their words to the end of the world. In them has he put a tent for the sun,
- Darby Translation (DBY)
- Their line is gone out through all the earth, and their language to the extremity of the world. In them hath he set a tent for the sun,
- Webster's Bible (WBS)
- Their line hath gone out through all the earth, and their words to the end of the world. In them hath he set a tabernacle for the sun,
- Young's Literal Translation (YLT)
- Into all the earth hath their line gone forth, And to the end of the world their sayings, For the sun He placed a tent in them,
Read in context
- 2ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
- 3ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
- 4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
- 5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
- 6ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
Cross references
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Genesis 1:14–18 ಆದಿಕಾಂಡ 1:14–18ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು. ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Psalm 98:3 ಕೀರ್ತನೆಗಳು 98:3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- 2 Corinthians 10:13–16 2 ಕೊರಿಂಥದವರಿಗೆ 10:13–16ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ. ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು; ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.