Psalms · chapter 2 · verse 6
Psalm 2:6 in Kannada
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
Aadaagyoo naanu nanna arasanannu nanna parishuddha parvatavaada cheeyonina mele sthaapisiddene.
Psalm 2:6 in English
- King James Version (KJV)
- Yet have I set my king upon my holy hill of Zion.
- World English Bible (WEB)
- “Yet I have set my King on my holy hill of Zion.”
- American Standard Version (ASV)
- Yet I have set my king Upon my holy hill of Zion.
- Bible in Basic English (BBE)
- But I have put my king on my holy hill of Zion.
- Darby Translation (DBY)
- And I have anointed my king upon Zion, the hill of my holiness.
- Webster's Bible (WBS)
- Yet have I set my king upon my holy hill of Zion.
- Young's Literal Translation (YLT)
- 'And I — I have anointed My King, Upon Zion — My holy hill.'
Read in context
- 4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- 5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- 6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
Cross references
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Psalm 45:6 ಕೀರ್ತನೆಗಳು 45:6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Psalm 48:1–2 ಕೀರ್ತನೆಗಳು 48:1–2ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Psalm 110:1–2 ಕೀರ್ತನೆಗಳು 110:1–2ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Acts 5:30–31 ಅಪೊಸ್ತಲರ ಕೃತ್ಯಗಳು 5:30–31ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Psalm 78:68 ಕೀರ್ತನೆಗಳು 78:68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.