Psalms · chapter 2 · verse 7
Psalm 2:7 in Kannada
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
Kattaleyannu saaruttene; kartanu nanage heliddu--neenu nanna maganu, naanu ee hottu ninnannu padediddene.
Psalm 2:7 in English
- King James Version (KJV)
- I will declare the decree: the LORD hath said unto me, Thou [art] my Son; this day have I begotten thee.
- World English Bible (WEB)
- I will tell of the decree: The LORD said to me, “You are my son. Today I have become your father.
- American Standard Version (ASV)
- I will tell of the decree: Jehovah said unto me, Thou art my son; This day have I begotten thee.
- Bible in Basic English (BBE)
- I will make clear the Lord's decision: he has said to me, You are my son, this day have I given you being.
- Darby Translation (DBY)
- I will declare the decree: Jehovah hath said unto me, Thou art my Son; I this day have begotten thee.
- Webster's Bible (WBS)
- I will declare the decree: the LORD hath said to me, Thou [art] my Son; this day have I begotten thee.
- Young's Literal Translation (YLT)
- I declare concerning a statute: Jehovah said unto me, 'My Son Thou [art], I to-day have brought thee forth.
Read in context
- 5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- 6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- 9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
Cross references
- Hebrews 5:5 ಇಬ್ರಿಯರಿಗೆ 5:5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- Acts 13:33 ಅಪೊಸ್ತಲರ ಕೃತ್ಯಗಳು 13:33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- Hebrews 1:5–6 ಇಬ್ರಿಯರಿಗೆ 1:5–6ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ? ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Psalm 89:27 ಕೀರ್ತನೆಗಳು 89:27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Matthew 16:16 ಮತ್ತಾಯನು 16:16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.