Psalms · chapter 20 · verse 7
Psalm 20:7 in Kannada
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
Kelavaru rathagalalliyoo kelavaru kuduregala lliyoo bharavasaviduttaare; aadare naavu namma devaraada kartana hesarannu jnyaapakamaadutteve.
Psalm 20:7 in English
- King James Version (KJV)
- Some [trust] in chariots, and some in horses: but we will remember the name of the LORD our God.
- World English Bible (WEB)
- Some trust in chariots, and some in horses, but we trust in the name of the LORD our God.
- American Standard Version (ASV)
- Some [trust] in chariots, and some in horses; But we will make mention of the name of Jehovah our God.
- Bible in Basic English (BBE)
- Some put their faith in carriages and some in horses; but we will be strong in the name of the Lord our God.
- Darby Translation (DBY)
- Some make mention of chariots, and some of horses, but we of the name of Jehovah our God.
- Webster's Bible (WBS)
- Some [trust] in chariots, and some in horses: but we will remember the name of the LORD our God.
- Young's Literal Translation (YLT)
- Some of chariots, and some of horses, And we of the name of Jehovah our God Make mention.
Read in context
- 5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- 6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- 7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- 8ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- 9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Cross references
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Jeremiah 17:5 ಯೆರೆಮೀಯ 17:5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- 2 Chronicles 32:8 2 ಪೂರ್ವಕಾಲವೃತ್ತಾಂತ 32:8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- 2 Chronicles 20:12–20 2 ಪೂರ್ವಕಾಲವೃತ್ತಾಂತ 20:12–20ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು. ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು. ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು. ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ. ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ. ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು. ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು. ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು. ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Psalm 45:17 ಕೀರ್ತನೆಗಳು 45:17ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- 2 Chronicles 13:10–12 2 ಪೂರ್ವಕಾಲವೃತ್ತಾಂತ 13:10–12ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ. ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- 2 Chronicles 13:16 2 ಪೂರ್ವಕಾಲವೃತ್ತಾಂತ 13:16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.