Psalms · chapter 21 · verse 13
Psalm 21:13 in Kannada
ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Kartane, ninna svanta baladinda neenu ghana hondidavanaagu; heege naavu ninna paraakrama vannu haadi keertisuvevu.
Psalm 21:13 in English
- King James Version (KJV)
- Be thou exalted, LORD, in thine own strength: [so] will we sing and praise thy power.
- World English Bible (WEB)
- Be exalted, LORD, in your strength, so we will sing and praise your power.
- American Standard Version (ASV)
- Be thou exalted, O Jehovah, in thy strength: So will we sing and praise thy power.
- Bible in Basic English (BBE)
- Be lifted up, O Lord, in your strength; so will we make songs in praise of your power.
- Darby Translation (DBY)
- Be thou exalted, Jehovah, in thine own strength: we will sing and celebrate thy power.
- Webster's Bible (WBS)
- Be thou exalted, LORD, in thy own strength: [so] will we sing and praise thy power.
- Young's Literal Translation (YLT)
- Be Thou exalted, O Jehovah in, Thy strength, We sing and we praise Thy might!
Read in context
- 11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- 12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- 13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
Cross references
- Revelation 16:5–7 ಪ್ರಕಟನೆ 16:5–7ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Revelation 19:1–6 ಪ್ರಕಟನೆ 19:1–6ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 57:11 ಕೀರ್ತನೆಗಳು 57:11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 113:5 ಕೀರ್ತನೆಗಳು 113:5ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
- Revelation 11:17 ಪ್ರಕಟನೆ 11:17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Psalm 72:18–19 ಕೀರ್ತನೆಗಳು 72:18–19ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Matthew 6:10 ಮತ್ತಾಯನು 6:10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Psalm 57:5 ಕೀರ್ತನೆಗಳು 57:5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Job 9:19 ಯೋಬನು 9:19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.