Psalms · chapter 21 · verse 5
Psalm 21:5 in Kannada
ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
Nna rakshaneyalli avana hechchalavu doddadaagide, gauravavannoo ghanateyannoo avana mele iduttee.
Psalm 21:5 in English
- King James Version (KJV)
- His glory [is] great in thy salvation: honour and majesty hast thou laid upon him.
- World English Bible (WEB)
- His glory is great in your salvation. You lay honor and majesty on him.
- American Standard Version (ASV)
- His glory is great in thy salvation: Honor and majesty dost thou lay upon him.
- Bible in Basic English (BBE)
- His glory is great in your salvation: honour and authority have you put on him.
- Darby Translation (DBY)
- His glory is great through thy salvation; majesty and splendour hast thou laid upon him.
- Webster's Bible (WBS)
- His glory [is] great in thy salvation: honor and majesty hast thou laid upon him.
- Young's Literal Translation (YLT)
- Great [is] his honour in Thy salvation, Honour and majesty Thou placest on him.
Read in context
- 3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- 4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- 5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- 6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- 7ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
Cross references
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Revelation 5:8–13 ಪ್ರಕಟನೆ 5:8–13ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Ephesians 1:20–22 ಎಫೆಸದವರಿಗೆ 1:20–22ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- John 17:22 ಯೋಹಾನನು 17:22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Psalm 8:5 ಕೀರ್ತನೆಗಳು 8:5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Psalm 96:6 ಕೀರ್ತನೆಗಳು 96:6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
- Isaiah 49:5–7 ಯೆಶಾಯ 49:5–7ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.