Psalms · chapter 22 · verse 24
Psalm 22:24 in Kannada
ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
Sankata paduvavana sankata vannu aatanu tiraskarisalilla, asahyisalilla; tanna mukhavannu avaninda maremaadalilla; aadare avanu moreyidalu aatanu kelidanu.
Psalm 22:24 in English
- King James Version (KJV)
- For he hath not despised nor abhorred the affliction of the afflicted; neither hath he hid his face from him; but when he cried unto him, he heard.
- World English Bible (WEB)
- For he has not despised nor abhorred the affliction of the afflicted, neither has he hidden his face from him; but when he cried to him, he heard.
- American Standard Version (ASV)
- For he hath not despised nor abhorred the affliction of the afflicted; Neither hath he hid his face from him; But when he cried unto him, he heard.
- Bible in Basic English (BBE)
- For he has not been unmoved by the pain of him who is troubled; or kept his face covered from him; but he has given an answer to his cry.
- Darby Translation (DBY)
- For he hath not despised nor abhorred the affliction of the afflicted; neither hath he hid his face from him: but when he cried unto him, he heard.
- Webster's Bible (WBS)
- For he hath not despised nor abhorred the affliction of the afflicted; neither hath he hid his face from him; but when he cried to him, he heard.
- Young's Literal Translation (YLT)
- For He hath not despised, nor abominated, The affliction of the afflicted, Nor hath He hidden His face from him, And in his crying unto Him He heareth.
Read in context
- 22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- 23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- 24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- 25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- 26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
Cross references
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Isaiah 50:6–9 ಯೆಶಾಯ 50:6–9ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ. ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Psalm 116:3–6 ಕೀರ್ತನೆಗಳು 116:3–6ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- Psalm 118:5 ಕೀರ್ತನೆಗಳು 118:5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 69:29–34 ಕೀರ್ತನೆಗಳು 69:29–34ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ. ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು. ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು. ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು. ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ. ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- Psalm 69:17 ಕೀರ್ತನೆಗಳು 69:17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 22:6 ಕೀರ್ತನೆಗಳು 22:6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.