Psalms · chapter 22 · verse 26
Psalm 22:26 in Kannada
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
Deenaru undu truptiyaaguvaru; kartanannu hudukuvavaru aatanannu stutisuvaru; nimma hrudayavu endendigoo badukuvadu.
Psalm 22:26 in English
- King James Version (KJV)
- The meek shall eat and be satisfied: they shall praise the LORD that seek him: your heart shall live for ever.
- World English Bible (WEB)
- The humble shall eat and be satisfied. They shall praise the LORD who seek after him. Let your hearts live forever.
- American Standard Version (ASV)
- The meek shall eat and be satisfied; They shall praise Jehovah that seek after him: Let your heart live for ever.
- Bible in Basic English (BBE)
- The poor will have a feast of good things: those who make search for the Lord will give him praise: your heart will have life for ever.
- Darby Translation (DBY)
- The meek shall eat and be satisfied; they shall praise Jehovah that seek him: your heart shall live for ever.
- Webster's Bible (WBS)
- The meek shall eat and be satisfied: they shall praise the LORD that seek him: your heart shall live for ever.
- Young's Literal Translation (YLT)
- The humble do eat and are satisfied, Praise Jehovah do those seeking Him, Your heart doth live for ever.
Read in context
- 24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- 25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- 26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- 27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- 28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
Cross references
- Psalm 69:32 ಕೀರ್ತನೆಗಳು 69:32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
- Isaiah 65:13 ಯೆಶಾಯ 65:13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
- Psalm 40:16 ಕೀರ್ತನೆಗಳು 40:16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 105:3–4 ಕೀರ್ತನೆಗಳು 105:3–4ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- Psalm 107:9 ಕೀರ್ತನೆಗಳು 107:9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- John 6:48–58 ಯೋಹಾನನು 6:48–58ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Leviticus 7:11–17 ಯಾಜಕಕಾಂಡ 7:11–17ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.