Psalms · chapter 22 · verse 31
Psalm 22:31 in Kannada
ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Avaru bandu aatane idannu maadiddaanendoo aatana neetiyannoo huttaliruva janarige tilisuvaru.
Psalm 22:31 in English
- King James Version (KJV)
- They shall come, and shall declare his righteousness unto a people that shall be born, that he hath done [this].
- World English Bible (WEB)
- They shall come and shall declare his righteousness to a people that shall be born, for he has done it.
- American Standard Version (ASV)
- They shall come and shall declare his righteousness Unto a people that shall be born, that he hath done it.
- Bible in Basic English (BBE)
- They will come and make his righteousness clear to a people of the future because he has done this.
- Darby Translation (DBY)
- They shall come, and shall declare his righteousness unto a people that shall be born, that he hath done [it].
- Webster's Bible (WBS)
- They shall come, and shall declare his righteousness to a people that shall be born, that he hath done [this] .
- Young's Literal Translation (YLT)
- They come and declare His righteousness, To a people that is borne, that He hath made!
Read in context
- 29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- 30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- 31ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Cross references
- Psalm 78:6 ಕೀರ್ತನೆಗಳು 78:6ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Psalm 102:18 ಕೀರ್ತನೆಗಳು 102:18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
- Isaiah 44:3–5 ಯೆಶಾಯ 44:3–5ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು. ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Psalm 40:9 ಕೀರ್ತನೆಗಳು 40:9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
- Psalm 145:4–7 ಕೀರ್ತನೆಗಳು 145:4–7ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 5:19–21 ರೋಮಾಪುರದವರಿಗೆ 5:19–21ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Isaiah 66:7–9 ಯೆಶಾಯ 66:7–9ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು. ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು. ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
- Romans 3:21–25 ರೋಮಾಪುರದವರಿಗೆ 3:21–25ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Isaiah 49:21–23 ಯೆಶಾಯ 49:21–23ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.