Psalms · chapter 22 · verse 4
Psalm 22:4 in Kannada
ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
Ninnalli namma pitrugalu bharavasavittaru; avaru bharavasavittaddarinda neenu avarannu tappi sidi.
Psalm 22:4 in English
- King James Version (KJV)
- Our fathers trusted in thee: they trusted, and thou didst deliver them.
- World English Bible (WEB)
- Our fathers trusted in you. They trusted, and you delivered them.
- American Standard Version (ASV)
- Our fathers trusted in thee: They trusted, and thou didst deliver them.
- Bible in Basic English (BBE)
- Our fathers had faith in you: they had faith and you were their saviour.
- Darby Translation (DBY)
- Our fathers confided in thee: they confided, and thou didst deliver them.
- Webster's Bible (WBS)
- Our fathers trusted in thee: they trusted, and thou didst deliver them.
- Young's Literal Translation (YLT)
- In Thee did our fathers trust — they trusted, And Thou dost deliver them.
Read in context
- 2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- 3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
- 4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
- 5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
Cross references
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Exodus 14:13–14 ವಿಮೋಚನಕಾಂಡ 14:13–14ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Romans 4:18–22 ರೋಮಾಪುರದವರಿಗೆ 4:18–22ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
- Hebrews 11:8–32 ಇಬ್ರಿಯರಿಗೆ 11:8–32ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ. ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು. ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು. ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು. ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು. ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು. ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ. ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು. ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ. ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- Genesis 15:6 ಆದಿಕಾಂಡ 15:6ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Psalm 44:1–7 ಕೀರ್ತನೆಗಳು 44:1–7ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- Genesis 32:9–12 ಆದಿಕಾಂಡ 32:9–12ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- 1 Samuel 7:9–12 1 ಸಮುವೇಲನು 7:9–12ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು. ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು. ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು. ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.