Psalms · chapter 22 · verse 6
Psalm 22:6 in Kannada
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
Naanu hulave, manushyanalla; manushyarinda nindisalpattavanoo janarinda tiraskarisalpattavanoo aagiddene.
Psalm 22:6 in English
- King James Version (KJV)
- But I [am] a worm, and no man; a reproach of men, and despised of the people.
- World English Bible (WEB)
- But I am a worm, and no man; a reproach of men, and despised by the people.
- American Standard Version (ASV)
- But I am a worm, and no man; A reproach of men, and despised of the people.
- Bible in Basic English (BBE)
- But I am a worm and not a man; cursed by men, and looked down on by the people.
- Darby Translation (DBY)
- But I am a worm, and no man; a reproach of men, and the despised of the people.
- Webster's Bible (WBS)
- But I [am] a worm, and no man; a reproach of men, and despised by the people.
- Young's Literal Translation (YLT)
- And I [am] a worm, and no man, A reproach of man, and despised of the people.
Read in context
- 4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
- 5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- 6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- 7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- 8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
Cross references
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Job 25:6 ಯೋಬನು 25:6ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Psalm 69:7–12 ಕೀರ್ತನೆಗಳು 69:7–12ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Psalm 69:19–20 ಕೀರ್ತನೆಗಳು 69:19–20ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- Matthew 11:19 ಮತ್ತಾಯನು 11:19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Matthew 27:20–23 ಮತ್ತಾಯನು 27:20–23ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.